ಭುವನೇಶ್ವರ, ಆ.19 (DaijiworldNews/TA) : ಒಡಿಶಾದ ಐದು ಜಿಲ್ಲೆಗಳಲ್ಲಿ ಭಾನುವಾರ ಸಿಡಿಲು ಬಡಿದ ಪರಿಣಾಮ 6 ಮಂದಿ ಮರಣಗೊಂಡಿದ್ದಾರೆ. ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ವರದಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ 9 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಲ್ಲದೇ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 300 ಜನ ಸಿಡಿಲು ಬಡಿದು ಸಾವನ್ನಪ್ಪುತ್ತಿದ್ದಾರೆ. ಇದನ್ನು ತಪ್ಪಿಸಲು 20 ಲಕ್ಷ ತಾಳೆ ಮರಗಳನ್ನು ರಾಜ್ಯಾದ್ಯಂತ ಶೀಘ್ರದಲ್ಲೇ ನೆಡಲು ಸರ್ಕಾರ ಮುಂದಾಗಿದೆ ಎಂಬುವುದಾಗಿ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ತಿಳಿಸಿದ್ದಾರೆ. ಒಡಿಶಾದಲ್ಲಿ ಮಿಂಚಿನ ಸಾವಿನ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂಬುವುದಾಗಿ ಅವರು ಹೇಳಿದ್ದಾರೆ.