ನವದೆಹಲಿ, ಆ 20 (DaijiworldNews/MS): ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 21 ರಿಂದ 23ರವರೆಗೆ ಪೋಲೆಂಡ್ ಮತ್ತು ಉಕ್ರೇನ್ ದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ತನ್ಮಯ ಲಾಲ್ ಸುದ್ದಿಗೋಷ್ಠಿಯಲ್ಲಿ ಇಂದು ತಿಳಿಸಿದರು.
ಆಗಸ್ಟ್ 21 ಮತ್ತು 22 ರಂದು ಪ್ರಧಾನಿ ನರೇಂದ್ರ ಮೋದಿ, ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಲಿದ್ದಾರೆ. 45 ವರ್ಷಗಳವರೆಗೆ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳಿದ್ದು, ಈ ಭೇಟಿ ಐತಿಹಾಸಿಕವಾಗಿದೆ ಎಂದರು.
ಬಳಿಕ ಪ್ರಧಾನಿ, ಆಗಸ್ಟ್ 23ರಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಉಕ್ರೇನ್ಗೆ ಭೇಟಿ ನೀಡಲಿದ್ದಾರೆ ಎಂದು ತನ್ಮಯ ಲಾಲ್ ತಿಳಿಸಿದರು. ಭಾರತ ಮತ್ತು ಉಕ್ರೇನ್ ದೇಶಗಳು ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ 30 ವರ್ಷಗಳ ನಂತರ ಭಾರತೀಯ ಪ್ರಧಾನಿಯೊಬ್ಬರು ಉಕ್ರೇನ್ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು ಎಂದರು