ಕಾರವಾರ, ಆ.23 (DaijiworldNews/TA) : ಉತ್ತರ ಕನ್ನಡ ಜಿಲ್ಲೆಯ ಶಿರೂರು ಭೂ ಕುಸಿತ ಪ್ರಕರಣದ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ.
ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದರು. ಈ ಪತ್ರಕ್ಕೆ ಮೋದಿ ಸ್ಪಂದಿಸಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಂತ್ರಸ್ತರಿಗೆ ವಿಶೇಷ ಅನುದಾನ ಬಿಡುಗಡೆಗೆ ಮೋದಿ ಅನುಮತಿ ನೀಡಿದ್ದಾರೆ ಜೊತೆಗೆ, ಕೇಂದ್ರ ಸರ್ಕಾರದಿಂದ ಶಿರೂರು ದುರಂತದಲ್ಲಿ ಸಾವನ್ನಪ್ಪಿದವರಿಗೆ ಎನ್ಡಿಆರ್ಎಫ್ ರಿಲೀಫ್ ಫಂಡ್ನಿಂದ 5 ಲಕ್ಷ ಬಿಡುಗಡೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ. ಆದರೆ, ಕೇರಳ ಮೂಲದ ಅರ್ಜುನ್ ಇದುವರೆಗೂ ಪತ್ತೆಯಾಗಿಲ್ಲ. ಸತತ ಪ್ರಯತ್ನದ ಮೂಲಕ ಹುಡುಕಾಟ ನಡೆಸಲಾಗಿತ್ತಾದರೂ ಅರ್ಜುನನ ಸುಳಿವು ಮಾತ್ರ ಸಿಕ್ಕಿಲ್ಲ.