ಬೆಂಗಳೂರು, ಆ.23 (DaijiworldNews/TA) : ಆದೇಶ ಉಲ್ಲಂಘನೆ ಆರೋಪದ ವಿಚಾರವಾಗಿ ಯತ್ನಾಳ್ ವಿರುದ್ಧದ ಕೋರ್ಟ್ ವಿಚಾರಣೆ ರದ್ದು ಮಾಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ‘ಎಲ್ಲ ಹಿಂದುಗಳು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುತ್ತಾರೆ’ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು.
ಈ ವೀಡಿಯೋ ವೈರಲ್ ಆಗಿತ್ತು. ಈ ಕಾರಣದಿಂದ ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪ ಸಂಬಂಧ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ವಿಚಾರಣಾ ನ್ಯಾಯಾಲಯ ಮೇ11ರಂದು ಸಮನ್ಸ್ ಜಾರಿಗೊಳಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದ ಖಾಸಗಿ ದೂರು ಮತ್ತು ವಿಚಾರಣಾ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶಾಸಕ ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ವಿಚಾರಣೆ ರದ್ದು ಮಾಡಿ ಆದೇಶ ನೀಡಿದೆ.