ನವದೆಹಲಿ, ಆ.23(DaijiworldNews/AA): ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಬಂಧನ ಪ್ರಶ್ನಿಸಿ, ಜಾಮೀನು ಕೋರಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐಗೆ ಈ ವಿಷಯದಲ್ಲಿ ತನ್ನ ಪ್ರತಿವಾದ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡಿದೆ. ಜೊತೆಗೆ ಕೇಜ್ರಿವಾಲ್ಗೆ ಮರು ಅರ್ಜಿ ಸಲ್ಲಿಸಲು ಎರಡು ದಿನಗಳ ಕಾಲಾವಕಾಶವನ್ನೂ ನೀಡಿತು.
ಇನ್ನು ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮುಖ್ಯಮಂತ್ರಿಯ ನ್ಯಾಯಾಂಗ ಬಂಧನವನ್ನು ಆಗಸ್ಟ್ 27 ರವರೆಗೆ ವಿಸ್ತರಿಸಲಾಗಿತ್ತು. ಈ ತೀರ್ಪು ಪ್ರಕಟಗೊಂಡ ಎರಡು ದಿನಗಳ ನಂತರ ಇದೀಗ ಜಾಮೀನು ಅರ್ಜಿಯನ್ನು ಮುಂದೂಡಲಾಗಿದೆ.