ಜಲ್ನಾ, ಆ.24(DaijiworldNews/TA):ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿ ಶನಿವಾರ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 22 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.
ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ. ಗಜ್ ಕೇಸರಿ ಸ್ಟೀಲ್ ಮಿಲ್ನಲ್ಲಿ ಮಧ್ಯಾಹ್ನದ ಸುಮಾರಿಗೆ ಸಂಭವಿಸಿದ ಸ್ಫೋಟದಿಂದಾಗಿ ಕರಗಿದ ಕಬ್ಬಿಣವು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ಅವರು ಹೇಳಿದ್ದಾರೆ.
ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.