ಬೆಂಗಳೂರು, ಆ.25(DaijiworldNews/TA):ಮುಡಾ ಹಗರಣ ಸೇರಿದಂತೆ ಅನೇಕ ವಿಚಾರಗಳು ಹೈಕಮಾಂಡ್ ಜೊತೆ ಚರ್ಚೆಯಾಗಿವೆ. ಸಚಿವರಿಗೆ ಕೊಕ್ ಅಂತಹ ವಿಚಾರ ಏನು ಚರ್ಚೆ ಆಗಿಲ್ಲ. ಬೈರತಿ ಸುರೇಶ್ ಅವರು ಮಗನ ಮದುವೆಯಲ್ಲಿ ಬ್ಯುಸಿಯಾಗಿದ್ದಾರೆ. ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ದೆಹಲಿಯಿಂದ ಆಗಮಿಸಿ ಮಾತನಾಡಿದ ಅವರು, ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಚರ್ಚೆ ಮಾಡಿಕೊಂಡು ಬಂದಿದ್ದೇನೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು ಹಲವು ಸಚಿವರು ಸಹ ಬಂದಿದ್ದರು. ಸರ್ಕಾರದ ಆಡಳಿತ ಬಗ್ಗೆ ಒಂದಷ್ಟು ಚರ್ಚೆ ಮಾಡಿದ್ದೇವೆ ಎಂದರು.
ನೀವು ನಿರೀಕ್ಷೆ ಮಾಡಿದಂತ ವಿಚಾರಗಳು ಏನು ಚರ್ಚೆಯಾಗಿಲ್ಲ. ಸಂದರ್ಭ ಬಂದಾಗ ಅರ್ಕಾವತಿ ಡಿನೋಟಿಫಿಕೇಷನ್ ವರದಿ ಬಹಿರಂಗ ಮಾಡುತ್ತೇವೆ. ಸರ್ಕಾರದಲ್ಲಿ ಎಲ್ಲವು ಪಾರದರ್ಶಕವಾಗಿರುತ್ತದೆ ಎಂದು ಹೇಳಿದರು.