ಬೆಂಗಳೂರು, ಆ.27(DaijiworldNews/AA): ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೋರ್ಟ್ ಮೊರೆ ಹೋಗಿದ್ದಾರೆ.
ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡಬಾರದು ಎಂದು ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಬೊಮ್ಮಾಯಿ ಅವರು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ ಕೋರ್ಟ್, ನಾಳೆ ಆದೇಶ ಹೊರಡಿಸಲಿದೆ.
ಆದರೆ ಬಸವರಾಜ ಬೊಮ್ಮಾಯಿ ಅವರು ಏಕಾಏಕಿ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತರಲು ಹೊರಟ್ಟಿರುವುದು ಕುತೂಹಲ ಮೂಡಿಸಿದೆ. ಬೊಮ್ಮಾಯಿ ಅವರ ಈ ನಡೆ ಹಲವು ಅನುಮಾನಗಳನ್ನು ಸೃಷ್ಟಿಸಿದ್ದು, ಕೋರ್ಟ್ ಮೊರೆ ಹೋಗಿರುವುದು ಭಾರೀ ಚರ್ಚೆಗೆ ಕೂಡ ಗ್ರಾಸವಾಗಿದೆ.