ಬೆಳಗಾವಿ,,ಆ.29(DaijiworldNews/AK): ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ. ಯಾವುದೇ ಒತ್ತಡಕ್ಕೆ ಮಣಿಯದೇ, ಅರ್ಹರಿಗಷ್ಟೇ ನೌಕರಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ನಗರದಲ್ಲಿ ಗುರುವಾರ ಬೆಳಗಾವಿ ಗ್ರಾಮೀಣ ಕ್ಷೇ ತ್ರದ ಅಂಗನವಾಡಿಗಳಿಗೆ ನೇಮಕಗೊಂಡ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇ ತ್ರದ ವ್ಯಾಪ್ತಿಯ 35 ಮಹಿಳೆಯರಿಗೆ ಅದೇ ಶ ಪತ್ರ ನೀ ಡಲಾಗಿದೆ. ಅನುಕಂ ಪದ ಆಧಾರದ ಮೇಲೆ ಮೂವರಿಗೆ ನೌಕರಿ ನೀಡಲಾಗಿದೆ ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಾಂಟೆಸ್ಸರಿ ಶೀಘ್ರವೇ ವಿಸ್ತರಗೊಳ್ಳಲಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳು ಅನುದಾನ ನೀಡಲಿದ್ದು, ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ ಕೂಡ ಸಿಗಲಿದೆ ಎಂದು ತಿಳಿಸಿದರು.