ಬೆಂಗಳೂರು, ,ಆ.29(DaijiworldNews/AK): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.