ಶ್ರೀನಗರ, ಆ.29(DaijiworldNews/TA):ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ವೀಕ್ಷಿಸಿದರು.
28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭೇಟಿ ನೀಡಿದರು. ನಂತರ ಉರಿಗೆ ತೆರಳಿದ ಅವರು, ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ ಕ್ಕೆ ಭೇಟಿ ಕೊಟ್ಟರು.
480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಉರಿಯ ಝಿಲಂ ನದಿ ದಂಡೆಯಲ್ಲಿ ಈ ವಿದ್ಯುತ್ ಉತ್ಪಾದನಾ ಘಟಕ ಇದೆ.