ಬೆಂಗಳೂರು, ಸೆ.1 (DaijiworldNews/TA): ನನ್ನ ಪ್ರಾಣ ಒತ್ತೆ ಇಟ್ಟು ಊಟ, ತಿಂಡಿ ಮರೆತು ಹಗಲಿರುಳು ರೋಗಿಗಳ ಸೇವೆ ಮಾಡಿದ್ದೇನೆ, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಕೋವಿಡ್ ಹಗರಣಗಳ ಸಂಬಂಧ ಮೈಕೆಲ್ ಡಿ. ಕುನ್ಹಾ ನೇತೃತ್ವದ ಆಯೋಗದಿಂದ ಮಧ್ಯಂತರ ವರದಿ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಎಲ್ಲರೂ ಸೇರಿ ಗುಣಾಕಾರ-ಭಾಗಾಕಾರ ಲೆಕ್ಕ ಮಾಡಿದ್ದಾರೆ. ನಾನು ಕೋವಿಡ್ ಕಾಲದಲ್ಲಿ ವೈದ್ಯಕೀಯ ಸಚಿವನಾಗಿದ್ದೆ.
ನಾನು ಆವಾಗ ಅತಃಕರಣದಿಂದ ಕೆಲಸ ಮಾಡಿದ್ದೇನೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ತಿಳಿಸಿದರು. ಮುಂದುವರೆದು ಮಾತನಾಡಿ ಅವರು, ವರದಿ ಬಗ್ಗೆ ಸರ್ಕಾರದ ಹೇಳಿಕೆ ಬರಲಿ. ಊಹಾಪೋಹಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದು ಗುಡುಗಿದ್ದಾರೆ.