ಬೆಂಗಳೂರು, ,ಸೆ.02 (DaijiworldNews/AK):ರಾಹುಲ್ ಖರ್ಗೆ ಯವರ ಸಿದ್ದಾರ್ಥ ವಿಹಾರ ಟ್ರಸ್ಟ್ಗೆ ತಮ್ಮ ಪ್ರಭಾವ ಬಳಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೆಐಎಡಿಬಿಯಿಂದ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದುಕೊಂಡು ಹೀ ಗೆ ಸರ್ಕಾ ರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂ ಕ್ ಖರ್ಗೆ , ನಮ್ಮ ಪ್ರಕರಣದಲ್ಲೂ ರಾಜ್ಯಪಾಲರು ವಿವರಣೆ ಕೇ ಳಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದರು. ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್ನದು ಒಂ ದು ಸಂ ವಿಧಾನ. ಕಾಂ ಗ್ರೆಸ್ಗೊಂದು ಸಂವಿಧಾನ ಎಂದು ಕಿಡಿಕಾರಿದರು.