ಧಾರವಾಡ , ಸೆ.04 (DaijiworldNews/AK): ಕೆಲವು ದಿನಗಳ ಹಿಂದೆ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಇದೀಗ, ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವವರೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದು ವರಸೆ ಬದಲಾಯಿಸಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕೂಡ ಖುಷಿಯಿಂದ ಸಾಥ್ ನೀಡಿದ್ದಾರೆ. ನಾನು ಸಿಎಂ ರೇಸ್ನಲ್ಲಿ ಇಲ್ಲವೇ ಇಲ್ಲ ಎಂದರು.
ನಾನು ಐವತ್ತು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನ್ನ ತಲೆ ರಾಜಕೀಯದಲ್ಲೆ ಬೆಳ್ಳಗಾಗಿದೆ. ಮಾಧ್ಯಮಗಳು ಮತ್ತು ಪತ್ರಕರ್ತರು ನನ್ನನ್ನು ಎಷ್ಟೇ ಪ್ರಚೋದಿಸಿದರೂ ನಾನು ತಾಳ್ಮೆ ಕಳೆದುಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ದೇಶಪಾಂಡೆ ಹೇಳಿದರು.