ಬೆಂಗಳೂರು,ಸೆ.05 (DaijiworldNews/AK): ಚಿತ್ರದುರ್ಗದ ರೇಣುಕಸ್ವಾಮಿಗೆ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದು, ಅದರ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಈ ಫೋಟೋದಲ್ಲಿ ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ.
ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು ಬೇಡಿಕೊಳ್ಳುತ್ತಿರುವ ಹಾಗೂ ನಿತ್ರಾಣಗೊಂಡು ಮಲಗಿರುವ ಫೋಟೊಗಳು ಲಭ್ಯವಾಗಿವೆ. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷ್ಯ ಗಳು ಸಿಕ್ಕಿದಂತೆ ಆಗಿದೆ.
ಶೆಡ್ನಲ್ಲಿ ರೇಣುಕಾ ಸ್ವಾಮಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೊ ಇದಾಗಿದೆ. ಮೈಮೇಲೆ ಗಾಯದ ಗುರುತುಗಳಿವೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಇನ್ನ ಮುಂದೆ ಪವಿತ್ರಾಗೆ ಸಂದೇ ಶ ಕಳುಹಿಸುವುದಿಲ್ಲ. ತಪ್ಪಾಯಿತು ಬಿಡಿ ಎಂ ದು ಪರಿಪರಿಯಾಗಿ ಕ್ಷಮೆ ಕೋರಿದ್ದರೂ ಆರೋ ಪಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು ಎಂದು ತಿಳಿದು ಬಂದಿದೆ.ಈ ಅಂಶಗಳನ್ನೂ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ವಿವರವಾಗಿ ಉಲ್ಲೇ ಖಿಸಿದ್ದಾರೆ ಎಂದು ಮೂಲಗಳು ಹೇಳಿವೆ.