ಬೆಂಗಳೂರು,ಸೆ.05 (DaijiworldNews/AK): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ಹಿನ್ನಲೆ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ತೆರಳುವ ಬಗ್ಗೆ ತೀರ್ಮಾನಿಸಲಾಯಿತು. ಅಷ್ಟೇ ಅಲ್ಲದೇ ಕೆಲವು ಯೋಜನೆಗಳಿಗೆ ಅನುಮೋದನೆ ಸಹ ನೀಡಲಾಯಿತು. ಈ ಕುರಿತು ಸಭೆ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ ವಿವರಿಸಿದರು.
ರಾಜ್ಯದ ಒಳಾಡಳಿತ ಇಲಾಖೆ 59 ಜನ ಕೈದಿಗಳ ಸನ್ನಡತೆ ಆಧಾರದ ಮೇಲೆ ಅವಧಿ ಮುನ್ನ ಬಿಡುಗಡೆಗೆ ನಿರ್ಧಾರ.ವಸತಿ ಇಲಾಖೆಯಲ್ಲಿ ಬೆಟ್ಟಗೇರಿಯಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ. ಕಾರ್ಮಿಕ ಇಲಾಖೆಯ ಬಳಕೆದಾರರಿಂದ ಸಂಗ್ರಹಿಸುವ, ಕಾನೂನು ಇಲಾಖೆ ಅಡಿ ಬರುವ ಎಂಟು ಕಾಯ್ಡೆ ಅಡಿ, ಬಳಕೆದಾರರಿಂದ ಸಂಗ್ರಹಿಸುವ ದಂಡವನ್ನ 30% ಹೆಚ್ಚಳಕ್ಕೆ ನಿರ್ಧಾರ.
ಕಾನೂನು ಸೇವಾ ತಿದ್ದುಪಡಿ ಕರಡು ನಿಯಮಗಳಿಗೆ 15 ದಿನ ಅವಕಾಶ ನೀಡುವುದು, ಆಕ್ಷೇಪಣೆ ಬಾರದಿದ್ರೆ ಸದರಿ ಕರಡು ನಿಯಮ ಮಂಡಿಸದೆ ನಿರ್ಣಯ ತೆಗೆದುಕೊಳ್ಳಲು ಅನುಮೋದನೆ.ವೈದ್ಯಕೀಯ ಶಿಕ್ಷಣ ಇಲಾಖೆ, ಕಿಮ್ಸ್ ಆಸ್ಪತ್ರೆಗೆ ಸಲಕರಣೆ ಖರೀದಿಗೆ 75 ಕೋಟಿ ಅನುದಾನ ನೀಡಲು ಅನುಮೋದನೆ.ಮೈಸೂರಿನ ನೆಫ್ರೋಲಜಿ ನೂರು ಬೆಡ್ ಸಾಮರ್ಥ್ಯ ಹೆಚ್ಚಳಕ್ಕೆ ಅನುಮೋದನೆ.ಕಲಬುರಗಿಯ ಮಕ್ಕಳ ಆಸ್ಪತ್ರೆಯನ್ನ ಇಂದಿರಾಗಾಂಧಿ ಆಸ್ಪತ್ರೆ ಸಹಯೋಗದಲ್ಲಿ 150 ಹಾಸಿಗೆ ಆಸ್ಪತ್ರೆ ಸ್ಥಾಪನೆಗೆ 221 ಕೋಟಿ ಬಿಡುಗಡೆಗೆ ಅನುಮೋದನೆ.ಅನ್ನಭಾಗ್ಯ ಯೋಜನೆ ಅಡಿ 5k.g ಅಕ್ಕಿಯ ಹಣವನ್ನ ನೀಡುವ ಯೋಜನೆ ಮುಂದುವರೆಸಲು ನಿರ್ಧಾರ. ಒಬ್ಬ ವ್ಯಕ್ತಿಗೆ 170 ರೂ ಹಣವನ್ನ ನೀಡಲಿರೋ ಸರ್ಕಾರ. ಬೆಂಗಳೂರು ನೆಪ್ರೋ- ಯುರಾಲಜಿ ಆಸ್ಪತ್ರೆಯ ಹೊರ ರೋಗಿಗಗಳ ವಿಭಾಗಗಕ್ಕೆ ನೂತನ ಕಟ್ಟಡಕ್ಕೆ 16.15 ಕೋಟಿಗೆ ಅನುಮೋದನೆ ಸೇರಿದಂತೆ ಹಲವು ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗಿ ತಿರ್ಮಾನ ಮಾಡಲಾಯಿತು.
ಈ ವೇಳೆ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಸಭೆ ನಡೆಸಿ ನ್ಯಾಯಾಂಗ ಉಲ್ಲಂಘನೆ ಮಾಡಿಲ್ಲ ಅಂತ ಎಚ್.ಕೆ ಪಾಟೀಲ್ ಹೇಳಿದರು.