ಜಮ್ಮು, ಸೆ.12 (DaijiworldNews/TA): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನವೇ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ವಲಯದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಪತ್ತೆಹಚ್ಚಲಾಗಿತ್ತು ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮೂಲಕ ತಿಳಿಸಲಾಗಿದೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಕೆಲವು ದಿನಗಳ ಮೊದಲು ಶಸ್ತ್ರಾಸ್ತ್ರಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಎಕೆ 47 ರೌಂಡ್ಗಳು, ಹ್ಯಾಂಡ್ ಗ್ರೆನೇಡ್ಗಳು, ಆರ್ಪಿಜಿ ರೌಂಡ್ಗಳು, ಸುಧಾರಿತ ಸ್ಫೋಟಕ ಸಾಧನಗಳು ಮತ್ತು ಇತರ ಶಸ್ತ್ರಾಸ್ತ್ರಗಳ ಮದ್ದುಗುಂಡುಗಳು ಮತ್ತು ಸ್ಫೋಟಕಗಳ ದೊಡ್ಡ ಸಂಗ್ರಹ ವಶಕ್ಕೆ ಪಡೆಯಲಾಗಿದೆ.