ಬೆಂಗಳೂರು, ಸೆ.13 (DaijiworldNews/AK): ಗೃಹ ಸಚಿವ ಆಗಲು ನಾನು ಸಮರ್ಥನಿಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅದು ನನಗೆ ಬಹಳ ಸಂತೋಷ ತಂದಿದೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ.ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು ಎಂದು ಗೃಹ ಸಚಿವ ಡಾ. ಪರಮೇಶ್ವರ್ ಹೇಳಿದ್ದಾರೆ.
ನಾನು ಮೂರ್ನಾಲ್ಕು ಬಾರಿ ಗೃಹ ಸಚಿವನಾಗಿದ್ದೇನೆ. ಸಮರ್ಥವಾಗಿ ನಾನು ಎಲ್ಲವನ್ನೂ ನಿಭಾಯಿಸಿದ್ದೇನೆ. ನನ್ನ ಸಾಮರ್ಥ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ಹೇಳಿದ್ದಾರೆ.
ಬಿಜೆಪಿ ಕಾಲದ ಹಗರಣಗಳ ತನಿಖೆಗೆ ಸಮಿತಿ ರಚಿಸಲಾಗಿದೆ. ನಾವು ಇಂದು ಮೊದಲ ಸಭೆ ಮಾಡಿದ್ದೇವೆ. ಮೂರ್ನಾಲ್ಕು ಕೇಸ್ಗಳನ್ನು ತನಿಖೆಗೆ ಕೊಡುವ ಬಗ್ಗೆ ನಿರ್ಧಾರ ಮಾಡಿದ್ದೇವೆ. 2 ತಿಂಗಳೊಳಗೆ ವರದಿ ಕೊಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅದರಂತೆ ನಾವು ಕೊಡುತ್ತೇವೆ ಎಂದರು.
ಸುಮಾರು ವರ್ಷಗಳ ಪ್ರಕರಣಗಳು ಬಾಕಿ ಇವೆ. ನಮ್ಮ ಸರ್ಕಾರದ ಪ್ರಕರಣಗಳೂ ಇವೆ. ಎಲ್ಲವನ್ನೂ ತನಿಖೆ ಮಾಡಬೇಕಿದೆ ಎಂದು ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.