ಬೆಂಗಳೂರು, ಸೆ.16(DaijiworldNews/AA): ಗುತ್ತಿಗೆದಾರರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನ ಅವರು ವಿಚಾರಣೆ ವೇಳೆ ಇದು ನನ್ನ ಆಡಿಯೋ ಅಲ್ಲ ಎಂದು ಹೇಳಿದ್ದಾರೆ.
ಗುತ್ತಿಗೆದಾರರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನ ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ನಾಳೆ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಖುದ್ದು ವಿಚಾರಣೆಯ ನೇತೃತ್ವ ವಹಿಸಿದ್ದಾರೆ. ವಿಚಾರಣೆ ವೇಳೆ ಇದು ನನ್ನ ಆಡಿಯೋ ಅಲ್ಲ ಅಂತ ಮುನಿರತ್ನ ಹೇಳಿದ್ದಾರೆ. ಜೊತೆಗೆ ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗಿದೆ. ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್ ಮಾಡಲು ನನ್ನನ್ನು ಬಲಿಪಶು ಮಾಡುತ್ತಿದ್ದಾರೆ ಎಂಬುದಾಗಿ ದೂರಿದ್ದಾರೆ ಎಂದು ಹೇಳಲಾಗಿದೆ.
ಇಂದು ಸಂಜೆ ವೇಳೆ ಮುನಿರತ್ನ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಯಿತು.