ಕಲಬುರಗಿ, ಸೆ.17(DaijiworldNews/AK): ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ವಿಮೋ ಚನೆಗೊಂ ಡ ಸ್ಮರಣಾರ್ಥ ಆಚರಿಸಲಾಗುವ ಕಲ್ಯಾಣ ಕರ್ನಾ ಟಕ ಉತ್ಸವದ ಅಂಗವಾಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರ ಧ್ವಜಾರೋ ಹಣ ನೆರವೇರಿಸಿದರು.
ಕಲ್ಯಾಣ ಕರ್ನಾಟಕ 371J ಅನುಷ್ಠಾನಗೊಂಡ ದಶಮಾನೋತ್ಸವ ಸಂಭ್ರಮ ಉದ್ಘಾಟನೆಗೆ ತೆರಳುವ ಮುನ್ನ ಕಲ್ಯಾಣ ಕರ್ನಾಟಕದ ಹರಿಕಾರ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುನ್ನಡೆದರು.ನಂತರ ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಸೇವಾದಳ ಸೇರಿದಂತೆ 24 ವಿವಿಧ ತುಕಡಿಗಳ ಪಥಸಂಚಲನವನ್ನು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇ ಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇ ವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ , ನಗರಾಭಿವೃದ್ಧಿ ಬೈರತಿ ಸುರೇಶ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸೇ ರಿದಂ ತೆ
ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.