ಮಂಡ್ಯ, ಸೆ.20 (DaijiworldNews/AK): ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ. ನಾನು ಯಾಕೆ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ಡಿನೋಟಿಫಿಕೇಷನ್ ವಿಚಾರವಾಗಿ ಕಾಂಗ್ರೆಸ್ ಸಚಿವರು ತನ್ನ ರಾಜೀನಾಮೆ ಕೇಳುತ್ತಿದ್ದಾರೆ. ನನಗೂ ಮುಡಾ ಹಗರಣಕ್ಕೂ ಏನು ಸಂಬಂಧ? ಕನ್ನಡ ಓದೋಕೊ ಬರುತ್ತೋ, ಇಂಗ್ಲಿಷ್ ಓದೋಕೊ ಬರುತ್ತೋ ಕೇಳಿ. ಮೊದಲು ಆ ಪೇಪರ್ನಲ್ಲಿ ಏನಿದೆ ಎಂದು ಸರಿಯಾಗಿ ಕುಳಿತು ನೋಡಲು ಹೇಳಿ ಎಂದು ತಿರುಗೇಟು ನೀಡಿದರು.
ಅವರು ಕೇಳಿದರೂ ಅಂತಾ ನಾನು ಯಾಕೆ ರಾಜೀನಾಮೆ ಕೊಡಬೇಕು? ಏನು ತಪ್ಪು ಮಾಡಿದ್ದೇನೆ? ದಾಖಲೆಗಳನ್ನು ಅವರು ಸರಿಯಾಗಿ ನೋಡಿದ್ದರಾ? ಯಾವನೋ ಬರೆದುಕೊಟ್ಟಿದ್ದಾನೆ ಅದನ್ನು ಬಂದು ತುತ್ತೂರಿ ಊದಿದ್ದಾರೆ. ತನಿಖೆ ಮಾಡಲಿ ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ಹೇಳಿದರು.