ಹುಬ್ಬಳ್ಳಿ, ಸೆ.21 (DaijiworldNews/AK): ತಿರುಪತಿ ಪ್ರಸಾದ ಲಾಡುವಿನ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ. ಆಂಧ್ರಪ್ರದೇಶದ ಹಿಂದಿನ ಸರ್ಕಾರ ಲಾಡು ತಯಾರಿಕೆಗೆ ರಾಜ್ಯದ ನಂದಿನಿ ತುಪ್ಪ ತರಿಸಿಕೊಳ್ಳಲಾಗುತ್ತಿತ್ತು. ಅದನ್ನು ನಿಲ್ಲಿಸಿ, ಬೇರೆ ಕಡೆಯಿಂದ ತುಪ್ಪ ತರಿಸಿಕೊಳ್ಳಲು ಆರಂಭಿಸಿದಾಗಿನಿಂದ ಈ ರೀತಿ ಘಟನೆಗಳು ನಡೆದಿವೆ ಎಂದು ಕೇಂದ್ರ ಸಚಿವ ಪ್ರಹ್ಲದ್ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದ ಪ್ರಯೋಗಾಲಯದ ವರದಿಯನ್ನು ಆಂಧ್ರಪ್ರದೇ ಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಅಗಬೇಕು ಎಂದರು.
ಎಲ್ಲ ದೇವಸ್ಥಾನಗಳಲ್ಲಿ ಸ್ವಚ್ಛತೆ, ಜನರ ಶ್ರದ್ಧೆಗೆ ಧಕ್ಕೆ ಆಗದಂತೆ ದೇವಸ್ಥಾನದ ಆಡಳಿತ ಮಂಡಳಿಯವರು ಕಾಲಕಾಲಕ್ಕೆ ಪರಿಶೀಲಿಸಬೇಕು. ಇದರಲ್ಲಿ ಸರ್ಕಾರ ಕೈಹಾಕಬಾರದು. ಇದು ದೇಶದ ಜನರ ಶ್ರದ್ಧೆ, ಸಂಸ್ಕೃತಿಯ ಪ್ರಶ್ನೆ. ಈ ರೀತಿ ದ್ರೋಹ ಮಾಡುವುದು ಸರಿಯಲ್ಲ. ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿದರು.