ನವದೆಹಲಿ, ಸೆ.21(DaijiworldNews/AA): ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ಅವರು ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅತಿಶಿಯವರೊಂದಿಗೆ ಆಮ್ ಆದ್ಮಿ ಪಕ್ಷದ ಐವರು ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಅತಿಶಿ ಅವರನ್ನು ದೆಹಲಿಯ ಮುಂದಿನ ಸಿಎಂ ಎಂದು ಘೋಷಿಸಲಾಗಿತ್ತು. ಇದೀಗ ಅತಿಶಿ ಅವರು ದೆಹಲಿಯ 3ನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ದೆಹಲಿಯ ಅತಿ ಕಿರಿಯ ವಯಸ್ಸಿನ ಸಿಎಂ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರೆ.