ಬೆಂಗಳೂರು, ಸೆ.23(DaijiworldNews/AK): ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ ಕಾರ್ತಿಕ್, ನಿಖಿಲ್ ನಾಯಕ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು.
ಕಾರ್ತಿಕ್, ನಿಖಿಲ್ ನಾಯಕ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಕಾರ್ತಿಕ್, ಕೇಶವ್ಮೂರ್ತಿ, ನಿಖಿಲ್ ನಾಯಕ್ ಕ್ರಮವಾಗಿ ಎ 15, ಎ16, ಎ17 ಆರೋಪಿಗಳಾಗಿದ್ದರು.
ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು.ಈ ಮೂವರು ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಕೊಲೆಯಲ್ಲಿ ನೇರವಾಗಿ ಭಾಗಿಯಾಗದ ಕಾರಣ ಮೂವರಿಗೆ ಇಂದು ಜಾಮೀನು ಸಿಕ್ಕಿದೆ.