ಬೆಳಗಾವಿ, ಸೆ.24(DaijiworldNews/AK):ಕಾಂಗ್ರೆಸ್ ಹೈ ಕಮಾಂಡ್ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನೈತಿಕಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ನೈತಿಕಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಹೋರಾಟಕ್ಕೆ ಅರ್ಥವಿಲ್ಲ. ಹೈಕೋ ರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೇ .ತನಿಖೆಯಾಗಲಿ. ತಪ್ಪು ಕಂಡುಬಂದರೆ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೋರಾಟಕ್ಕೆ ಅರ್ಥವಿಲ್ಲ. ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ ಅಷ್ಟೇ ತನಿಖೆಯಾಗಲಿ. ತಪ್ಪು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿದರು.
ಮುಡಾ ಪ್ರಕರಣ ತನಿಖೆ ಸಮಗ್ರವಾಗಿ ಆಗಲಿ. ಅಲ್ಲಿಯವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಎಲ್ಲ ಶಾಸಕರದ್ದು, ಹೈಕಮಾಂಡ್ದ್ದು ಕೂಡ ಇದೇ ಆಗ್ರಹವಾಗಿದೆ ಎಂದರು.