ಬೆಂಗಳೂರು, ಸೆ.25(DaijiworldNews/AK): ಬೆಂಗಳೂರು ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹಲವು ತಂಡಗಳನ್ನು ರಚಿಸಿಕೊಂಡು ಶೋಧಕಾರ್ಯ ನಡೆಸಿದ್ದಾರೆ.ಇದರ ನಡುವೆ ಹಲವು ವಿಚಾರಗಳು ಆರೋಪಿಯ ಪತ್ತೆಗೆ ಪೊಲೀಸರು ಹೊರ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿರುವಾಗಲೇ ಹಲವು ವಿಚಾರಗಳು ಬಹಿರಂಗಗೊಂಡಿವೆ.
ಮಹಾಲಕ್ಷ್ಮೀಯನ್ನು 50 ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಟ್ಟು, ಆರೋಪಿ ಪರಾರಿಯಾಗಿದ್ದಾನೆ. ಕೊಲೆಯಾದ ಮಹಾಲಕ್ಷ್ಮೀ ಮನೆಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಆರೋಪಿಯ ಗುರುತಿಗಾಗಿ ಶೋಧ ನಡೆಸಿದಾಗ ಹಲವರ ಬೆರಳಚ್ಚು ಗುರುತು ಪತ್ತೆಯಾಗಿವೆ. ಈ ಮೂಲಕ, ಮಹಾಲಕ್ಷ್ಮೀಯನ್ನು ಹಲವರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ.
ಈ ನಡುವೆ ಮಹಾಲಕ್ಷ್ಮಿಯ ತಾಯಿ ಮೀನಾ ಕೊಟ್ಟಿರುವ ದೂರಿನಲ್ಲಿ ಹಲವು ಸಂಗತಿಗಳು ಬಯಲಾಗಿವೆ. ಕೊಲೆಯಾದ ಈ ಮಹಾಲಕ್ಷ್ಮೀ ಎರಡನೇ ಮಗಳು. ಹೇಮಂತ್ ದಾಸ್ ಎಂಬುವುರ ಜೊತೆ ಅರೇಂಜ್ಡ್ ಮ್ಯಾರೆಜ್ ಆಗಿದ್ದರು. ಮಹಾಲಕ್ಷ್ಮೀ ಕಳೆದ ಒಂಬತ್ತು ತಿಂಗಳಿನಿಂದ ಪತಿಯಿಂದ ದೂರವಿದ್ದಳು. ಕಳೆದ ವರ್ಷ ಅಕ್ಟೋಬರ್ನಲ್ಲಿ ವೈಯಾಲಿಕಾವಲ್ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದಳು.
ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಹೇಳುವ ಪ್ರಕಾರ ಆರೋಪಿ ಹೊರ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದನಂತೆ. ಆರೋಪಿ, ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.