ಬೆಂಗಳೂರು, ಸೆ.27(DaijiworldNews/TA):ಸಿಎಂ ಸಿದ್ದರಾಮಯ್ಯಗೆ ಆತ್ಮ ಸಾಕ್ಷಿ ಇದ್ದರೆ ಕೂಡಲೇ ರಾಜೀನಾಮೆ ನೀಡಲಿ ಎಂದು ಬಿಜೆಪಿ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಾನು ಕಳಂಕರಹಿತ ಅಂತ ಹೇಳುತ್ತಿದ್ದರು. ಅವರ ನಡವಳಿಕೆಯೇ ಇವತ್ತು ಜನರಿಗೆ ಗೊತ್ತಾಗುತ್ತಿದೆ. ಸಿದ್ದರಾಮಯ್ಯ ಉಪದೇಶ ಕೊಡುತ್ತಿದ್ದರು.
ಸಿದ್ದರಾಮಯ್ಯ ಅವರ ಮಾತು ಕೇವಲ ನಾಲಿಗೆಯಿಂದ ಬಂದ ಮಾತಾ ಅಂತ ಜನ ವಿಮರ್ಶೆ ಮಾಡಲಿ. ಹೈಕೋರ್ಟ್ ನಲ್ಲಿ ತೀರ್ಪು ಬಂದಿದೆ. ಸಿದ್ದರಾಮಯ್ಯ ನಡೆದುಕೊಳ್ಳುತ್ತಿರುವ ರೀತಿ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನಡೆ ಎಂದು ಕಿಡಿಕಾರಿದರು.
ನಾಗೇಂದ್ರ ರಾಜೀನಾಮೆ ಕೇಳುವ ನೀವು ಯಾಕೆ ರಾಜೀನಾಮೆ ಕೊಡುತ್ತಿಲ್ಲ. ಸಿದ್ದರಾಮಯ್ಯಗೆ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ತನಿಖೆಯಿಂದ ಹಿಂದೆ ಓಡಿ ಹೋಗುವುದು ಬೇಡ ಎಂಬುವುದಾಗಿ ಹೇಳಿದರು.