ಮೈಸೂರು, ಸೆ.28(DaijiworldNews/AA): ಮಹಿಷ ದಸರಾದ ಹಿನ್ನೆಲೆ ನಾಳೆ ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಲಿದೆ.
ಪುರ ಭವನದ ಹೊರಾವರಣದಲ್ಲಿ ಮಹಿಷ ಮಂಡಲೊತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರಿನಲ್ಲಿ ಇಂದಿನಿಂದ ಇದೇ 30ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಯಾವುದೇ ಮೆರವಣಿಗೆ ಪ್ರತಿಭಟನೆಲಿ, ಬೈಕ್ ರ್ಯಾಲಿ ನಡೆಸುವುದು, ಪರ-ವಿರೋಧ ಘೋಷಣೆ ಕೂಗುವುದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.