ಜಮ್ಮು, ಸೆ.29(DaijiworldNews/AA): ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆಗೆ ತಯಾರಾಗುತ್ತಿದ್ದಂತೆ, ಚುನಾವಣಾ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದೆ. ಒಂದು ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನವು ಸೆ. 25 ರಂದು ಅಂತ್ಯವಾಯಿತು. ಇನ್ನು ಇದರ ಫಲಿತಾಂಶವು ಅಕ್ಟೋಬರ್ 8 ರಂದು ಪ್ರಕಟವಾಗಲಿದೆ.
ಇನ್ನು ೩ನೇ ಹಂತದಲ್ಲಿ 40 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 40 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳು ಜಮ್ಮು ವಿಭಾಗದ ವ್ಯಾಪ್ತಿಗೆ ಬರುತ್ತವೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ಸಚಿನ್ ಪೈಲಟ್ ಇಂದು ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಈ ಹಿನ್ನೆಲೆ ಖರ್ಗೆ ಅವರು ಜಸ್ರೋಟಾ ಮತ್ತು ರಾಮನಗರದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ವೇದಿಕೆಯಲ್ಲೇ ಅವರು ಕುಸಿದುಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.