ಮಹಾರಾಷ್ಟ್ರ, ಸೆ.30(DaijiworldNews/TA):ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದೆ.
ಭಾರತದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆ ಮತ್ತು ಅದರ ಸಂಪ್ರದಾಯಗಳನ್ನು ಉಲ್ಲೇಖಿಸಿ ಮಹಾಯುತಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಅಧಿಕೃತ ಆದೇಶದಲ್ಲಿ, ಗೋವುಗಳು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಮಹತ್ವವನ್ನು ಹೊಂದಿದೆ ಎಂದು ಸರ್ಕಾರ ಹೇಳಿದೆ.