ಧಾರವಾಡ, ಸೆ.30(DaijiworldNews/AK): ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಭ್ರಷ್ಟಾಚಾರ ರಾಜ್ಯದ ಜನತೆಗೆ ಗೊತ್ತಿದ್ದು, ಹೀಗಾಗಿ ಕೆಲವೇ ದಿನಗಳಲ್ಲಿ ನಮ್ಮ ರಾಜ್ಯಕ್ಕೆ ಹೊಸ ಸಿಎಂ ಬರುತ್ತಾರೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಹೊಸ ತಿರುವು ಪಡೆದಿದೆ.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಭ್ರಷ್ಟಾಚಾರದಲ್ಲಿಯೇ ಮುಳುಗಿರುವ ಕಾಂಗ್ರೆಸ್ ನಾಯಕರೇ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ. ಸಿಎಂ ಹಾಗೂ ಇಡೀ ಕಾಂಗ್ರೆಸ್ ಪರಿವಾರವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅದಕ್ಕಾಗಿಯೇ ಸಿಎಂ ಅವರಿಗೆ ಈಗ ಇಂತಹ ಸ್ಥಿತಿ ಬಂದಿದೆ ಎಂದರು.
ಚುನಾವಣಾ ಬಾಂಡ್ ಮುಂದಿಟ್ಟು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ರಾಜ್ಯದ ಬಿಜೆಪಿ ನಾಯಕರ ವಿರುದ್ದ ದೂರು ದಾಖಲು ಮಾಡಿರುವ ಸಿಎಂ ಸಿದ್ದರಾಮಯ್ಯ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಅಷ್ಟೇ . ಕಾನೂನು ಅಡಿಯವ್ಯವಸ್ಥೆಯಲ್ಲಿಯೇ ಹಣ ಪಡೆಯಲಾಗಿದೆ.