ಛತ್ತೀಸ್ಗಡ , ಅ. 04(DaijiworldNews/AK): ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ
ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ನಂತರ ಏಳು ನಕ್ಸಲರ ಮೃತದೇಹಗಳು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕಾರ್ಯಚರಣೆ ಮುಂದುವರಿದಿದೆ. ಬಸ್ತಾರ್ ಪ್ರದೇಶದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಕ್ಸಲರ ಶಿಬಿರವನ್ನು ಭೇದಿಸಿ ಸ್ಫೋ ಟಕಗಳು ಮತ್ತು ಇತರ ಸಾಮಗ್ರಿಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಂಡಿದ್ದರು.