ಸಂಡೂರು,ಅ. 04(DaijiworldNews/AK): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದರು.ಇದೀಗ ನಾನು ಮತ್ತೆ ವಿಧಾನಸಭೆ ಪ್ರವೇಶಿಸಿದ್ದೇನೆ.ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುವ ದಿನ ಹತ್ತಿರವಿದೆ ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.
ಅಭಿಮಾನಿಗಳು ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾನು ಯಾವುದೇ ತಪ್ಪು ಮಾಡಿಲ್ಲ. ಬಳ್ಳಾರಿ ಜಿಲ್ಲೆ ಅಭಿವೃದ್ಧಿ ಆಗಬೇಕು ಎಂಬ ಆಶಯ ನನಗಿತ್ತು ಎಂದರು.
ಉದ್ಯೋಗಾವಕಾಶಗಳು ದೊರೆತು ಎಲ್ಲರೂ ಚೆನ್ನಾಗಿ ಬದುಕಬೇಕು ಎಂಬ ಆಸೆ ಇಟ್ಟುಕೊಂಡಿದ್ದೆ. ನನ್ನ ಆಸೆ, ಆಕಾಂಕ್ಷೆಗಳನ್ನು ಹಾಳು ಮಾಡಿದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರಿಗೆ ಆ ದೇವರು ಈಗ ಅಧಿಕಾರವಿಲ್ಲದೆ ಮನೆಯಲ್ಲಿ ಕೂರಿಸಿದ್ದಾನೆ ಎಂದು ಟೀಕಿಸಿದರು.