ಬೆಂಗಳೂರು,ಅ.05(DaijiworldNews/AK): ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ. ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್ಗಳ ಜೊತೆ ಸಭೆ ನಡೆಸಿದ್ದೇನೆ. ನಾಲ್ಕೈದು ತಿಂಗಳಲ್ಲಿ ಎಲ್ಲಾ ರೈತರ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಈ ಬಾರಿ ಬಗರ್ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.