ಪುಣೆ,ಅ.05(DaijiworldNews/AK): ಹಿಂದುತ್ವ ಸಿದ್ಧಾಂತದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿ.ಡಿ. ಸಾವರ್ಕ ರ್ ಅವರ ಮೊಮ್ಮಗ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯವು ಅ.23ರಂ ದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಅವರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿ ಅವರು 2023ರಮಾರ್ಚ್ನಲ್ಲಿ, ಲಂಡನ್ನಲ್ಲಿ ಮಾಡಿದ ಭಾಷಣದಲ್ಲಿ, ವಿ.ಡಿ. ಸಾವರ್ಕರ್ ಅವರು ತಮ್ಮ ಐದಾರು ಸ್ನೇಹಿತರೊಂದಿಗೆ ಸೇರಿಕೊಂಡು ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಖುಷಿಪಟ್ಟಿದ್ದಾಗಿ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆಂದು ಹೇಳಿದ್ದಾರೆ.