ನವದೆಹಲಿ, ಅ.07(DaijiworldNews/AK): ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿಆರ್ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಅವರ ಇಬ್ಬರು ಪುತ್ರರಾದ ತೇಜಸ್ವಿ ಯಾದವ್ , ತೇಜ್ ಪ್ರತಾಪ್ ಯಾದವ್ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಜಾಮೀನು ನೀಡಿದೆ.
ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ತಲಾ 1 ಲಕ್ಷ ರೂ. ಬಾಂಡ್ಗಳ ಮೇಲೆ ಜಾಮೀನು ಮಂಜೂರು ಮಾಡಿದರು. ಅಲ್ಲದೇ ಎಲ್ಲಾ ಮೂವರು ಆರೋಪಿಗಳು ತಮ್ಮ ಪಾಸ್ಪೋರ್ಟ್ಗಳನ್ನು ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ.
ಪ್ರಕರಣದ ವಿಚಾರಣೆ ಹಿನ್ನೆಲೆ ಆರೋಪಿಗಳು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಹಾಜರಾಗಿದ್ದರು. ಇದಕ್ಕೂ ಮುನ್ನ ಅವರ ವಿರುದ್ಧದ ಪೂರಕ ಆರೋಪಪಟ್ಟಿಯನ್ನು ಆಧರಿಸಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು.