ಬೆಂಗಳೂರು, ಅ.09(DaijiworldNews/AK):ವಾಲ್ಮೀಕಿ ನಿಗಮದಲ್ಲಿನ ಹಗರಣ ಇಡೀ ಕರ್ನಾಟಕದಲ್ಲೇ ದೊಡ್ಡ ಸುದ್ದಿ ಮಾಡಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ ವರದಿ ಸಲ್ಲಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇಡಿ ಮಾಹಿತಿ ಹಂಚಿಕೊಂಡಿದ್ದು, ಇಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್ ಪರಿಜ್ಞಾನಕ್ಕೆ ಪಡೆದುಕೊಂಡಿದೆ.ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರರ ತಲೆದಂಡವೂ ಆಗಿತ್ತು. ಇತ್ತೀಚೆಗೆ ಇಡಿ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಕೂಡ ಸಲ್ಲಿಕೆ ಮಾಡಿತ್ತು.
ಅದರಲ್ಲಿ ಪ್ರಕರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ಬಿ.ನಾಗೇಂದ್ರರೇ ಆಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿತ್ತು.ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಆರೋಪ ಹೊರಿಸಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿತ್ತು