ಮುಂಬೈ, ಅ.14(DaijiworldNews/AA): ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುಣಡ ಮೂಲದ ಪ್ರವೀಣ್ ಲೋಂಕರ್ (28) ಎಂದು ಗುರುತಿಸಲಾಗಿದೆ.
ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದ್ದು, ಈತ ತನ್ನ ಸಹೋದರನೊಂದಿಗೆ ಸೇರಿಕೊಂಡು ಹತ್ಯಗೆ ಸಂಚು ರೂಪಿಸಿದ್ದ ಎಂದು ಆರೋಪಿಸಲಾಗಿದೆ. ಇನ್ನು ಪೊಲೀಸರು ತಲೆಮರೆಸಿಕೊಂಡಿರುವ ಈತನ ಸಹೋದರ ಶುಭಂ ಲೋಂಕರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಹತ್ಯೆಯಲ್ಲಿ ಸಂಚುಕೋರನಾಗಿದ್ದ ಪ್ರವೀಣ್ ಲೋಂಕರ್ ನನ್ನು ಬಂಧಿಸಲಾಗಿದೆ. ಈಗಾಗಲೇ ಬಂಧಿಸಲ್ಪಟ್ಟವರನ್ನು ಹರಿಯಾಣದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಎಂದು ಗುರುತಿಸಲಾಗಿದೆ.
ಬಂಧಿತರಿಂದ 2 ಪಿಸ್ತೂಲ್ಗಳು ಮತ್ತು 28 ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಮದು ತಿಳಿದುಬಂದಿದೆ.