ಬೆಂಗಳೂರು,,ಅ.13(DaijiworldNews/AK): ಪಿಎಸ್ಐ ಪರೀಕ್ಷೆಯ ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅಭಿಲಾಷೆ ಹೊತ್ತು ಕಾಯುತ್ತಿರುವ ಪರೀಕ್ಷಾರ್ಥಿಗಳ ಗೊಂದಲಗಳಿಗೆ ತೆರೆ ಎಳೆಯುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇತ್ತೀಚೆಗಷ್ಟೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಉಚ್ಛ ನ್ಯಾಯಾಲಯದ ಆದೇಶದಂತೆ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆ ನಡೆಸಿ 2024ರ ಮಾರ್ಚ್ 28 ರಂದು ಅಂತಿಮ ಪಟ್ಟಿ ಪ್ರಕಟಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಲು ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಮತ್ತು ತರಬೇತಿ ವಿಭಾಗಕ್ಕೆ ನೀಡಿ ಇದುವರೆಗೂ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸದೇ ಇರುವುದು ಸರ್ಕಾರದ ಬೇಜವಾಬ್ದಾರಿತನವೋ ಅಥವಾ ಯೋಜಿತ ಧೋರಣೆಯೋ ಎಂಬ ಅನುಮಾನ ಪರೀಕ್ಷಾರ್ಥಿಗಳಲ್ಲಿ ಕಾಡುತ್ತಿದೆ ಎಂದರು.