ಬೆಂಗಳೂರು, ಅ.21(DaijiworldNews/AA): ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಕೊನೆ ಕ್ಷಣದವರೆಗೂ ಬಿಜೆಪಿಯಿಂದ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದ ಸಿ.ಪಿ ಯೋಗೇಶ್ವರ್ಗೆ ಬಿಜೆಪಿ ಕಡೆಯಿಂದ ಯಾವುದೇ ಸುದ್ದಿ ಸಿಗದ ಹಿನ್ನಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ನೀಡಲಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ಭೇಟಿಗಾಗಿ ಅವರು ತೆರಳಿದ್ದಾರೆ. ಜೊತೆಗೆ ನಾಮಪತ್ರ ಸಲ್ಲಿಕೆಗೆ ವಕೀಲರನ್ನು ಯೋಗೇಶ್ವರ್ ಸಂಪರ್ಕಿಸಿದ್ದಾರೆ ಎಂದು ಹೇಳಲಾಗುತ್ತಿದೆ.