ಜಮ್ಮು ಮತ್ತು ಕಾಶ್ಮೀರ,ಅ.21(DaijiworldNews/TA):ಗಂದರ್ಬಾಲ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಹೇಯ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಅಪರಾಧಿಗಳು ಭದ್ರತಾ ಪಡೆಗಳಿಂದ ಕಠಿಣ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದಲ್ಲಿ ಭಯೋತ್ಪಾದಕರು ನಡೆಸಿದ ವಿವೇಚನಾರಹಿತ ಗುಂಡಿನ ದಾಳಿಯಲ್ಲಿ ವೈದ್ಯರು ಮತ್ತು ಐವರು ಕಾರ್ಮಿಕರು ಸಾವನ್ನಪ್ಪಿದ ಗಂಟೆಗಳ ನಂತರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಜೆ & ಕೆ, ಗಗಾಂಗೀರ್ನಲ್ಲಿ ನಾಗರಿಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯು ಒಂದು ಹೇಡಿತನದ ಕೃತ್ಯವಾಗಿದೆ. ಈ ಹೇಯ ಕೃತ್ಯದಲ್ಲಿ ಭಾಗಿಯಾದವರನ್ನು ಉಳಿಸಲಾಗುವುದಿಲ್ಲ ಮತ್ತು ನಮ್ಮ ಭದ್ರತಾ ಪಡೆಗಳಿಂದ ಕಠಿಣ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ. ಮೃತರ ಕುಟುಂಬಗಳಿಗೆ ಸಂತಾಪಗಳು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಷಾ 'ಎಕ್ಸ್' ನಲ್ಲಿ ಬರೆದಿದ್ದಾರೆ.