ಬೆಂಗಳೂರು, ಅ.22(DaijiworldNews/AK): ನಗರದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿ ಘಟನೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಶವಗಳನ್ನು ಹೊರತೆಗೆಯಲಾಗಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.