ಬೆಂಗಳೂರು, ಅ.22(DaijiworldNews/AK):ನಾವೆಲ್ಲ ಬಹಳ ವರ್ಷದಿಂದ ಕಾಂಗ್ರೆಸ್ನಲ್ಲಿ ಇದ್ದವರು. ಡಿ.ಕೆ. ಸುರೇಶ್ ಅವರು ನನ್ನನ್ನು ಕಾಂಗ್ರೆಸ್ಗೆ ಕರೆ ತರುವ ಪ್ರಯತ್ನ ನಡೆಸಿದ್ದರು ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, 'ನನ್ನ ರಾಜಕೀಯ ಜೀವನವನ್ನು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಆರಂಭಿಸಿದೆ. ಹಲವು ದಿನಗಳಿಂದ ರಾಜಕೀಯ ಬೆಳವಣಿಗೆಗಳನ್ನು ನೋಡಿದೆ. ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಜೆಡಿಎಸ್ ಜೊತೆ ಮೈತ್ರಿಯಾದ ಬಳಿಕ ನನ್ನ ಬೆಳವಣಿಗೆಗೆ ಪೂರಕವಾಗಿಲ್ಲ ಅಂದುಕೊಂಡೆ.ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದೇನೆ ಎಂದರು.
ಡಿ.ಕೆ. ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಭೇಟಿಯಾಗಿ ಚರ್ಚಿ ಸಿದೆ ಎಂಬುದೆಲ್ಲಾ ಸುಳ್ಳು. ಬೆಳಿಗ್ಗೆ ನೇರವಾಗಿ ಶಿವಕುಮಾರ್ ನಿವಾಸಕ್ಕೆ ತೆರಳಿದೆ. ನಂತರ ಮುಖ್ಯಮಂ ತ್ರಿ ನಿವಾಸಕ್ಕೂ ಹೋ ಗಿದ್ದೆ. ಆಮೂಲಕ, ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಬಂದಿದ್ದೇ ನೆ. ನಮ್ಮ ಜಿಲ್ಲೆಯನ್ನು ಅಭಿವೃದ್ಧಿ ಮಾಡುವುದೇ ಉದ್ದೇಶ ಎಂದರು.