ಬೆಂಗಳೂರು, ಅ.24(DaijiworldNews/AK): ಉಪ ಚುನಾವಣೆಯ ನೀತಿಸಂಹಿತೆ ಮುಗಿದ ಬಳಿಕ ಸಾಮಾಜಿಕ ಮತ್ತು ಶೈ ಕ್ಷಣಿಕ ಸಮೀಕ್ಷೆಯ (ಜಾತಿ ಜನಗಣತಿ) ವರದಿ ಕುರಿತು ಸಚಿವ ಸಂಪುಟಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ .ರಾಮಚಂದ್ರಪ್ಪ ನೇತೃತ್ವದಲ್ಲಿ ಪದಾಧಿಕಾರಿಗಳು ಮತ್ತು ವಿವಿಧ ಸಮುದಾಯಗಳ ಮುಖಂಡರು ಸೇರಿದ ನಿಯೋಗವು ಮುಖ್ಯಮಂತ್ರಿಯನ್ನು ಗುರುವಾರ ಭೇಟಿ ಮಾಡಿ ಜಾತಿ ಜನಗಣತಿ ವರದಿ ಒಪ್ಪಿಕೊಳ್ಳುವಂತೆ ಮನವಿ ಸಲ್ಲಿಸಿತು.
ನವೆಂಬರ್ ತಿಂಗಳ ಮೊದಲ ವಾರದ ಒಳಗೆ ಜಾತಿ ಜನಗಣತಿ ವರದಿಯನ್ನು ಒಪ್ಪಿಕೊಳ್ಳದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ನಿಯೋಗ ಎಚ್ಚರಿಕೆ ನೀಡಿದೆ.