ಕೊಲ್ಕತ್ತಾ, ಅ.25(DaijiworldNews/TA):ಡಾನಾ ಚಂಡಮಾರುತವು ಒಡಿಶಾ ಕರಾವಳಿಗೆ ಅಪ್ಪಳಿಸಿದೆ, ಇದರಿಂದಾಗಿ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿದೆ.
ಚಂಡಮಾರುತವು ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್ನ ಧಮ್ರಾ ನಡುವೆ 110 ಕಿಮೀ ವೇಗದಲ್ಲಿ ಗಾಳಿ ಬೀಸಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ.
ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಜನಜೀವನ ತತ್ತರಿಸಿದೆ. ವಿಮಾನಯಾನ, ರೈಲ್ವೇ ಸಂಚಾರವನ್ನು ರದ್ದುಗೊಳಿಸಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ೧೦ಲಕ್ಷ ಜನರನ್ನು ಸ್ಥಳಾಂತರಗೊಳಿಸಲಾಗಿದೆ.