ಶ್ರೀನಗರ, ನ.11(DaijiworldNews/AK):ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿ ವೇಳೆ ಇಬ್ಬರು ಚಾರಣಿಗರು ಸಿಕ್ಕಿಕೊಂಡ ಘಟನೆ ಜಮ್ಮು ಮತ್ತು ಜಬರ್ವಾನ್ನಲ್ಲಿ ನಡೆದಿದೆ.
ಚಾರಣಿಗರು ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆ 100ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಚಾರಣಿಗರನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಭಯೋತ್ಪಾದಕರ ಇರುವಿಕೆಯ ಗುಪ್ತಚರ ಮಾಹಿತಿ ಆಧಾರದ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳು ಜಬರ್ವಾನ್ ಅರಣ್ಯ ಪ್ರದೇಶದಲ್ಲಿ ಭಾನುವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.ಈ ವೇಳೆ ಚಾರಣಿಗರು ಆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದಾರೆ. ಬಳಿಕ ಅವರು ಬಂಡೆಗಳ ನಡುವೆ ಅಡಗಿಕೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಭದ್ರತಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅವರನ್ನು ರಕ್ಷಿಸಲಾಗಿದೆ.