ಬೆಂಗಳೂರು, ನ.11(DaijiworldNews/AK):15 ದಿನದಿಂದ ಬಿರುಸಿನ ಪ್ರಚಾರದಲ್ಲಿ ತೊಡಗಿದ ಎಲ್ಲಾ ಪಕ್ಷಗಳ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪ ಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಠೆ ಕಣವಾಗಿ ಪರಿಣಮಿಸಿದೆ. ಕೆಲ ದಿನಗಳಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಮೂಲಕ ಅಬ್ಬರ ಪ್ರಚಾರದಲ್ಲಿ ತೊಡಗಿದ್ದರು. ಆದರೆ ಇಂದು ಅದಕ್ಕೆಲ್ಲ ತೆರೆಬಿದ್ದಿದೆ.
ನಾಳೆಯಿಂದ ಎರಡು ದಿನ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಮಾಡಲು ಮಾತ್ರ ಅವಕಾಶವಿರುತ್ತದೆ. ಇನ್ನು ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆ.
ನವೆಂಬರ್ 13 ರಂದು ಮತದಾನ ನಡೆಯುವ ಹಿನ್ನಲೆ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಸ್ಥಗಿತ ಮಾಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ನವೆಂಬರ್ 14 ರ ಬೆಳಗ್ಗೆ 6 ಗಂಟೆವರೆಗೂ ಮದ್ಯಮಾರಾಟ ಮಾಡುವಂತಿಲ್ಲ.