ದಾವಣಗೆರೆ, ನ.12(DaijiworldNews/AK):ವಕ್ಫ್ ಮಂಡಳಿಯ ಆಸ್ತಿ ಹತ್ತು ವರ್ಷಗಳಲ್ಲಿ ಶೇ 30ರಷ್ಟು ಹೆಚ್ಚಾಗಿದೆ. ಇದು ಮುಂದುವರಿದರೆ ದೇಶ ವಿರೋಧಿ ಶಕ್ತಿಗಳಿಗೆ ಕುಮ್ಮಕ್ಕು ಸಿಕ್ಕಿ ದೊಡ್ಡ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ವಕ್ಫ್ ಆಸ್ತಿಯನ್ನು ಮುಸ್ಲಿಂ ಸಮುದಾಯದವರ ಬಳಕೆಗೆ ನೀಡಲಾಗುತ್ತದೆ. ಆಗ ಅಲ್ಲಿ ಎಂಥ ಚಟುವಟಿಕೆಗಳು ನಡೆಯುತ್ತವೆ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ವಿಶೇಷ ಸ್ಥಾನ ಪಡೆದಿದ್ದ ಕಾಶ್ಮೀರ ಭಯೋತ್ಪಾದಕರ ನೆಲೆಯಾಗಿರಲಿಲ್ಲವೇ ಎಂದು ಪ್ರಶ್ನಿಸಿದರು.
ವಕ್ಫ್ ಆಸ್ತಿಯನ್ನು ಹೆಚ್ಚಿಸಿಕೊಳ್ಳಲು ರಾಜ್ಯದ ಹಲವು ನಗರಗಳಲ್ಲಿ ಸರ್ವೇ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ. ರೈತರಿಗೆ ನೋಟಿಸ್ ನೀಡದೇ ಭೂದಾಖಲೆಗಳಲ್ಲಿ ವಕ್ಫ್ ಮಂಡಳಿ ಹೆಸರು ನಮೂದಿಸಲಾಗಿದೆ. ರೈತರಿಂದ ವಶಕ್ಕೆ ಪಡೆದ ಭೂಮಿಯನ್ನು ಕೂಡಲೇ ಹಿಂತಿರುಗಿಸಬೇಕು ಎಂದು ಆಗ್ರಹಿಸಿದರು.