ಬೆಂಗಳೂರು, ಡಿ.24(DaijiworldNews/AA): ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಡ್ರೋನ್ ಪ್ರತಾಪ್ ಅವರಿಗೆ ಜಾಮೀನು ಮಂಜೂರಾಗಿದ್ದು, ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರು ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.
ಡಿ.23 ರಂದು ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಡ್ರೋನ್ ಪ್ರತಾಪ್ಗೆ ಜಾಮೀನು ನೀಡಿ ತೀರ್ಪು ನೀಡಿದೆ.
ತಮ್ಮ ಯೂಟ್ಯೂವ್ ಚಾನೆಲ್ಗೆ ವಿಡಿಯೋ ಹಾಕುವ ಉದ್ದೇಶದಿಂದ ಪ್ರತಾಪ್ ಸೋಡಿಯಂ ಬಳಸಿ ಮಧುಗಿರಿ ತಾಲೂಕಿನ ಜನಕಲೋಟಿ ಬಳಿಯ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದರು. ಈ ಸಂಬಂಧ ಡಿ.12ರಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ನನ್ನು ಅರೆಸ್ಟ್ ಬಂಧಿಸಿದ್ದರು.
ಪ್ರತಾಪ್ ಅವರನ್ನು ಡಿ.16 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆ ಬಳಿಕ ಕೋರ್ಟ್ ಅವರಿಗೆ ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಪ್ರತಾಪ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ಇಂದು ಜೈಲಿನಿಂದ ಹೊರಬಲಿದ್ದಾರೆ ಎನ್ನಲಾಗುತ್ತಿದೆ.