ಚೆನ್ನೈ, ಫೆ.05(DaijiworldNews/TA) : ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಭಾರಿ ಸ್ಫೋಟ ಸಂಭವಿಸಿ 7 ಜನರು ಗಾಯಗೊಂಡಿದ್ದಾರೆ.

ಘಟನೆಯ ನಂತರ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸ್ಫೋಟದಲ್ಲಿ 7 ಜನರಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಅವರ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.